ಏ.27ರಂದು ಉಡುಪಿ, ಮಂಗಳೂರಿನಲ್ಲಿ ರಾಹುಲ್‌ ಗಾಂಧಿ ರೋಡ್‌ ಶೋ

ಕರಾವಳಿಯಲ್ಲಿ ಕಾಂಗ್ರೆಸ್‌ ಪ್ರಚಾರಕ್ಕೆ ಘಟಾನುಘಟಿಗಳು

ಉಡುಪಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಚುನಾವಣೆ ಪ್ರಚಾರಕ್ಕಾಗಿ ಏ.27ರಂದು ಉಡುಪಿ ಮತ್ತು ಮಂಗಳೂರಿಗೆ ಆಗಮಿಸಲಿದ್ದಾರೆ. ಏ.23-24 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಏ.27 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಉಡುಪಿ ಮಂಗಳೂರಲ್ಲಿ ಚುನಾವಣಾ ಪ್ರಚಾರ ಮತ್ತು ರೋಡ್‌ಶೋ ಮಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಏ.23ರಂದು ಮಧ್ಯಾಹ್ನ ಬೈಂದೂರಿನ ಉಪ್ಪುಂದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಭಾಗವಹಿಸಿಲಿದ್ದು, ಬಳಿಕ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏ.24ರಂದು ಬೆಳಗ್ಗೆ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗವಹಿಸಿ ಬಳಿಕ ಮಧ್ಯಾಹ್ನ ಉಡುಪಿಯಲ್ಲಿ ಸರ್ವಿಸ್ ಬಸ್ ನಿಲ್ದಾಣದಿಂದ ಹುತಾತ್ಮ ಸ್ಮಾರಕದ ವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ ಏ.27 ರಂದು ಕರಾವಳಿಗೆ ಜಿಲ್ಲೆಗೆ ಭೇಟಿ ಕೊಡಲಿದ್ದು, ಉಡುಪಿಯ ಉಚ್ಚಿಲದಲ್ಲಿ ನಡೆಯುವ ಬೃಹತ್ ಸಮಾವೇಶ ಭಾಗವಹಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೀನುಗಾರ ಸಮುದಾಯದೊಂದಿಗೆ ಸಂವಾದವನ್ನು ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕರಾವಳಿಗೆ ಪ್ರಚಾರಕ್ಕೆ ಆಗಮಿಸಲಿದ್ದಾರೆ.































































































































































error: Content is protected !!
Scroll to Top