ಕಾರ್ಕಳ : ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ನಿಟ್ಟೆ ದಿನಕರ್ ಶೆಟ್ಟಿ ನೇಮಕಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ ಅಶೋಕ್ ಕುಮಾರ್ ಕೊಡವೂರು ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ ಯವರು ದಿನಕರ್ ಶೆಟ್ಟಿ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಇವರು ಈ ಹಿಂದೆ ಕಾರ್ಕಳ ತಾಲೂಕು ಎನ್ಎಸ್‌ಯುಐ ಇದರ ಅಧ್ಯಕ್ಷರಾಗಿ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.























