ರತನ್ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಆಸ್ಟ್ರೇಲಿಯಾ ಪ್ರಶಸ್ತಿಗೆ ಭಾರತದ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಭಾಜನರಾಗಿದ್ದಾರೆ. ಭಾರತದಲ್ಲಿರುವ ಆಸ್ಟ್ರೇಲಿಯಾದ ರಾಯಭಾರಿ ಬ್ಯಾರಿ ಓ’ಫಾರೆಲ್ ಟ್ವಿಟರ್‌ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಆಸ್ಟೇಲಿಯಾಕ್ಕೆ ಉದ್ಯಮಿ ರತನ್ ಟಾಟಾ ಅವರ ಕೊಡುಗೆ ಅಪಾರ. ಭಾರತ – ಆಸ್ಟ್ರೇಲಿಯಾ ದ್ವಿಪಕ್ಷೀಯ ಸಂಬಂಧಗಳಿಗೆ, ವಿಶೇಷವಾಗಿ ವ್ಯಾಪಾರ, ಹೂಡಿಕೆ ಕ್ಷೇತ್ರಗಳಲ್ಲಿ ಅವರ ಸೇವೆ ಪರಿಗಣಿಸಿ ಆರ್ಡರ್ ಆಫ್ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ನೀಡಲಾಗಿದೆ. ರತನ್ ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ 421ನೇ ಸ್ಥಾನದಲ್ಲಿದ್ದರು. ಅದೇ ಸಮಯದಲ್ಲಿ, ಕಳೆದ ವರ್ಷ ಅಂದರೆ 2021ರ ವರದಿಯಲ್ಲಿ ಅವರು 3,500 ಕೋಟಿ ರೂಪಾಯಿ ಆಸ್ತಿಯೊಂದಿಗೆ 433ನೇ ಸ್ಥಾನದಲ್ಲಿದ್ದರು. ತಮ್ಮ ಗಳಿಕೆಯ ಹೆಚ್ಚಿನ ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ ನೀಡುವ ರತನ್‌ಟಾಟಾ ಕೊರೊನಾ ಸಂಕಷ್ಟದ ಸಂದರ್ಭ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದರು.





































































error: Content is protected !!
Scroll to Top