ಕಾರ್ಕಳ : ಬಿಜೆಪಿ ಕಾರ್ಯಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ರೆಂಜಾಳ ಗ್ರಾಮದ 17 ಮಂದಿ ಕಾರ್ಯಕರ್ತರು ರಮೇಶ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಜೀವನ್ ಹಾಗೂ ಸಾಧಿಕ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಭಾನುವಾರ ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಪುರಸಭೆಯ ವಿಪಕ್ಷ ನಾಯಕ ಅಶ್ಪಾಕ್ ಅಹ್ಮದ್, ಸುಬೀತ್ N.R, ವಲೇರಿಯನ್ ಪಾಯಸ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಂತಿ ಶೆಟ್ಟಿ, ಪುರಸಭೆ ಸದಸ್ಯರಾದ ಪ್ರತಿಮಾ ರಾಣೆ ಹಾಗೂ ನಳಿನಿ ಆಚಾರ್ಯ ಅವರನ್ನು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ರೆಂಜಾಳ ಗ್ರಾಮದ 17 ಮಂದಿ ಕಾಂಗ್ರೆಸ್ ಸೇರ್ಪಡೆ
























