ಸಾಣೂರು ಸ. ಪ. ಪೂ. ಕಾಲೇಜು ದ್ವಿತೀಯ ಪಿಯುಸಿಯಲ್ಲಿ ಶೇ. 99 ಫಲಿತಾಂಶ

ಕಾರ್ಕಳ : 2022 – 23 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಣೂರು ಸ. ಪ. ಪೂ. ಕಾಲೇಜು ಶೇ. 99 ಫಲಿತಾಂಶ ದಾಖಲಿಸಿದೆ. ಒಟ್ಟು 102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 60 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ಹಾಗೂ 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದಲ್ಲಿ ಜ್ಯೋತಿ, ಪವನ್ ಕುಮಾರ್ ಹಾಗೂ ಆದರ್ಶನ್. ವಾಣಿಜ್ಯ ವಿಭಾಗದಲ್ಲಿ ಸ್ವಾತಿ, ವೈಷ್ಣವಿ ಹಾಗೂ ನಿರಂಜನ್ ಮತ್ತು ವಿಜ್ಞಾನ ವಿಭಾಗದಲ್ಲಿ ಪ್ರಮಿತ್ ರಾವ್, ದೇವಿದಾಸ್ ಹಾಗೂ ರಶ್ಮಿತಾ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದಿಸಿದ್ದಾರೆ.





































































error: Content is protected !!
Scroll to Top