ಕಾರ್ಕಳ : ಪುರಸಭಾ ವ್ಯಾಪ್ತಿಯ ಬಂಗ್ಲೆಗುಡ್ಡೆ ಒಂದು ಮತ್ತು ಎರಡನೇ ವಾರ್ಡಿನ 30 ಮಂದಿ ಹಾಗೂ ರೆಂಜಾಳ ಗ್ರಾಮದ 16 ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ಸೋಮವಾರ ಸಂಜೆ ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿಯವರ ಸಮ್ಮುಖದಲ್ಲಿ ಪಕ್ಷದ ಧ್ವಜ ನೀಡಿ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪುರಸಭೆಯ ವಿಪಕ್ಷ ನಾಯಕ ಅಶ್ಪಾಕ್ ಅಹ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ಗಿರಿ ರಾಣೆ, ಪ್ರತಿಮಾ ರಾಣೆ, ಕಾಂತಾವರ ಉದಯ್ ಶೆಟ್ಟಿ, ಸುಬಿತ್ ಎನ್. ಆರ್., ಮುರಳಿ, ಸಂದೇಶ್ ಮೊದಲಾದವರು ಉಪಸ್ಥಿತರಿದ್ದರು.










































