ನವದೆಹಲಿ : ಚತ್ತಿಸ್‌ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ. ಅರನ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಪೊಲೀಸ್ ಜಿಲ್ಲಾ ರಿಸರ್ವ್ ಗಾರ್ಡ್‌ಗಳ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ರಾಜ್ಯ ರಾಜಧಾನಿ ರಾಯ್ ಪುರದಿಂದ 450 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಪಡೆಗಳು ಸಂಚರಿಸುತ್ತಿದ್ದ ಮಿನಿ ಗೂಡ್ಸ್ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟ ಸಾಧನದ ಮೂಲಕ ಸ್ಫೋಟಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



































