ಇಂದು ಉಡುಪಿ, ಮಂಗಳೂರಿನಲ್ಲಿ ರಾಹುಲ್‌ ಗಾಂಧಿ ರೋಡ್‌ ಶೋ

ಎರಡೂ ಕಡೆ ಸಾರ್ವಜನಿಕ ಸಭೆಯಲ್ಲಿ ಭಾಗಿ

ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಂಗಳೂರು ಮತ್ತು ಉಡುಪಿಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ ಉಡುಪಿ ಮತ್ತು ಕಾಪುವಿನಲ್ಲಿ ರಾಹುಲ್‌ ಗಾಂಧಿಯ ರೋಡ್‌ ಶೋ ಮತ್ತು ಸಾರ್ವಜನಿಕ ಸಭೆ ನಡೆಯಲಿದೆ.
ಮಂಗಳೂರಿನಲ್ಲಿ ಸಂಜೆ 5ಕ್ಕೆ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ. ನಗರದ ಕಲೆಕ್ಟರ್ಸ್ ಗೇಟ್‌ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು ಕಿಮೀ ರೋಡ್ ಶೋ ನಡೆಸಲಿದ್ದಾರೆ. ಅದ್ದೂರಿ ರೋಡ್ ಶೋ ನಡೆಯಲಿದ್ದು ದ.ಕ. ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಸಂಜೆ 6ಕ್ಕೆ ಅಡ್ಯಾರ್‌ನಲ್ಲಿ ಪ್ರಚಾರದ ಸಭೆ ನಡೆಸಲಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಮಂಗಳೂರು ನಗರದ ಬಲ್ಮಠ, ಕಲೆಕ್ಟರ್‌ ಗೇಟ್ ನಡುವೆ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ನಗರ ಮಧ್ಯೆ ರೋಡ್ ಶೋ ನಡೆಸುವುದಕ್ಕೆ ಅವಕಾಶ ಸಿಗದ ಕಾರಣ ಮಂಗಳೂರು ನಗರ ಹೊರವಲಯದ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಪ್ರಚಾರ ಸಭೆ ಏರ್ಪಡಿಸಲಾಗಿದೆ. ಪ್ರಚಾರ ಸಭೆ ನಡೆಯೋದಕ್ಕೂ ಮುನ್ನ ಅಡ್ಯಾರ್‌ನಲ್ಲಿ ಹೆದ್ದಾರಿ ಉದ್ದಕ್ಕೆ ಒಂದಷ್ಟು ರೋಡ್ ಶೋ ನಡೆಸಲಿದ್ದಾರೆ.

















































error: Content is protected !!
Scroll to Top