ಆಟೋದಲ್ಲಿ ಸಾಗಿಸುತ್ತಿದ್ದ ಹಣ
ಕಾರವಾರ: ಶಿವಮೊಗ್ಗದಿಂದ ಕುಮಟಾಕ್ಕೆ ಆಟೋದಲ್ಲಿ ಸಾಗಿಸುತ್ತಿದ್ದ 93.50 ಲ.ರೂ.ಯನ್ನು ಫ್ಲೈಯಿಂಗ್ ಸ್ಕ್ವಾಡ್ ವಶಪಡಿಸಿಕೊಂಡಿದೆ.
ಕುಮಟಾ ತಾಲೂಕಿನ ಚಂದಾವರ ಚೆಕ್‌ಪೋಸ್ಟ್‌ನಲ್ಲಿ ಈ ಘಟನೆ ಶುಕ್ರವಾರ ನಸುಕಿನ 2.30ರ ವೇಳೆಗೆ ನಡೆದಿದೆ.
ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹಣ ಸಮೇತ ವಶಕ್ಕೆ ಪಡೆಯಲಾಗಿದೆ. ಕುಮಟಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಚಂದಾವರ ಚೆಕ್‌ಪೋಸ್ಟ್‌ನಲ್ಲಿ ದಾಖಲೆಯಿಲ್ಲದೆ ಆಟೋರಿಕ್ಷಾದಲ್ಲಿ 93.50 ಲಕ್ಷ ರೂ. ಸಾಗಿಸಲಾಗುತ್ತಿತ್ತು. ಎಸ್.ಎಸ್.ಟಿ. ತಂಡ ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡದವರು ವಶಪಡಿಸಿಕೊಂಡಿದ್ದು, ಹಣವನ್ನು ಉಪಖಜಾನೆ ಕುಮಟಾದಲ್ಲಿ ಇರಿಸಲಾಗಿದೆ. ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ಇನ್ನೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಹಣ ಯಾರಿಗೆ ಸೇರಿದ್ದು, ಯಾವ ಪಕ್ಷಕ್ಕೆ ಸೇರಿದ್ದು ಎಂಬ ತನಿಖೆ ನಡೆಯುತ್ತಿದೆ.



































