ಕಾರ್ಕಳ : ಬೈಲೂರು ಕೆಳಪೇಟೆಯಲ್ಲಿ ಬೈಕ್‌ಗಳೆರಡ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಎ. 28ರಂದು ಸಂಜೆ ನಡೆದಿದೆ. ಯರ್ಲಪಾಡಿ ಗ್ರಾಮದ ಕಾಂತರಗೋಳಿ ರಮೇಶ್ ಆಚಾರ್ಯ (52) ಎಂಬವರೇ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ರಮೇಶ್ ಆಚಾರ್ಯರ ಪತ್ನಿ ಶಕುಂತಳಾ ಹಾಗೂ ಮತ್ತೊಂದು ಬೈಕ್‌ನಲ್ಲಿದ್ದ ಸುಧೀರ್, ಡೇವಿಡ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೈಲೂರಿನಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು




































