ಏಸ್‌ ವಾಹನ ಡಿಕ್ಕಿ : ಪಾದಚಾರಿ ಸಾವು

ಕಾರ್ಕಳ : ಏಸ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಪಾದಚಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ನಿಟ್ಟೆ ದೂಪದಕಟ್ಟೆಯಲ್ಲಿ ಏ. 29ರ ರಾತ್ರಿ ಸಂಭವಿಸಿದೆ. ಭೋಜ ಎಂಬುವವರೇ ಮೃತಪಟ್ಟ ದುರ್ದೈವಿ. ರಾತ್ರಿ 10:30ರ ಸಮಯದಲ್ಲಿ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ರಾಜೇಂದ್ರ ಶೆಟ್ಟಿಗಾರ್ ಎಂಬುವವರು (KA-20 D-5880) ಏಸ್‌ ವಾಹನವನ್ನು ಚಲಾಯಿಸಿಕೊಂಡು ಬರುತ್ತಿದ್ದು, ರಸ್ತೆ ದಾಟುತ್ತಿದ್ದ ಭೋಜ ಎಂಬವರಿಗೆ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ತಲೆಗೆ ತೀವ್ರ ಹಾಗೂ ಕೈಕಾಲುಗಳಿಗೆ ತರಚಿದ ಗಾಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಭೋಜ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಭೋಜರವರು ಅದಾಗಲೇ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಪರ್ಪಲೆಯ ಶಶಿಕಾಂತ ಎಂಬುವವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.







































































error: Content is protected !!
Scroll to Top