14 ಮೆಸೆಂಜರ್ ಆ್ಯಪ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರಕಾರ
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಕಣಿವೆ ಪ್ರದೇಶದ ಭಯೋತ್ಪಾದಕ ಗುಂಪುಗಳು ರಹಸ್ಯ ಸಂದೇಶ ಕಳುಹಿಸಲು ಬಳಸುತ್ತಿದ್ದ 14 ಮೆಸೆಂಜರ್ ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.
ಎನಿಗ್ಮಾ, ಸೇಫ್‌ವಿಸ್, ವಿಕ್ರ್ಮೆ, ಮೀಡಿಯಾಫೈರ್, ಕ್ರಿಪ್‌ವೈಸರ್, ಬ್ರಿಯಾರ್, ಬಿಚಾಟ್, ನಂಡ್‌ಬಾಕ್ಸ್, ಕೊನಿಯನ್, ಐಎಂಒ, ಜಂಗಿ, ಥ್ರೀಮಾ ಎಲಿಮೆಂಟ್ ಮತ್ತು ಸೆಕೆಂಡ್ ಲೈನ್ ಆ್ಯಪ್‌ಗಳನ್ನು ನಿಷೇಧಿಸಿದೆ.
ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ. ಈ ಆ್ಯಪ್‌ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ನಿರ್ಬಂಧಿಸಲಾಗಿದೆ. ಆ್ಯಪ್‌ಗಳು ಕಣಿವೆಯಲ್ಲಿ ಭಯೋತ್ಪಾದಕ ಸಂಭಧಿಸಿದ ಮಾಹಿತಿಗಳನ್ನು ಪ್ರಚಾರವನ್ನು ಮಾಡುತ್ತಿತ್ತು. ಈ ಆ್ಯಪ್‌ಗಳ ಮೂಲಕ ಉಗ್ರರು ರಹಸ್ಯ ಸಂದೇಶಗಳನ್ನು ಕಣಿವೆಯಲ್ಲಿರುವ ತನ್ನ ಕಾರ್ಯಕರ್ತರಿಗೆ ಕಳುಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ದೇಶದ ಭದ್ರತೆಗೆ ಧಕ್ಕೆ ತರುವ ಮೊಬೈಲ್ ಅಪ್ಲಿಕೇಷನ್‌ಗಳ ಮೇಲೆ ನಿಷೇಧ ಹೇರಿರುವುದು ಇದೇ ಮೊದಲಲ್ಲ. ಈ ಹಿಂದೆ ಚೀನದ ಹಲವು ಅಪ್ಲಿಕೇಷನ್‌ಗಳನ್ನು ಸರ್ಕಾರ ನಿಷೇಧಿಸಿದೆ.
























