ಕಾರ್ಕಳ : ವಿದ್ಯುತ್ ಕಂಬದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದಾಗಿ ನಿಟ್ಟೆ ಸಮೀಪ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ. ಮೆ. 1ರಂದು ನಿಟ್ಟೆ ಗ್ರಾಮದ ಪರಪ್ಪಾಡಿಯಲ್ಲಿ ಹಾಗೂ ಸಾಣೂರು ಗ್ರಾಮದ ಪರ್ಪಲೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬಿಸಿಲಿನ ಕಾವಿಗೆ ಇದೀಗ ಕಾರ್ಕಳ ಹೆಬ್ರಿಯ ಹಲವೆಡೆ ಬೆಂಕಿ ಅವಘಡ ಸಂಭವಿಸುತ್ತಿದ್ದು ಸಾಕಷ್ಟು ಮುನ್ನೆಚ್ಚರಿಕೆ ವಹಿಸುವಂತೆ ಅಗ್ನಿಶಾಮಕ ದಳದವರು ತಿಳಿಸಿದ್ದಾರೆ.




































