ತಂದೆ ಬಳಿಕ ಮಗನಿಂದ ಮೋದಿ ನಿಂದನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಲಾಯಕ್ ಎಂದು ನಿಂದಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ವಿಷಸರ್ಪಕ್ಕೆ ಎಂದು ಕರೆದು ವಿವಾದ ಮೈಮೇಲೆ ಎಳೆದುಕೊಂಡ ಬೆನ್ನಿಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಸೋಮವಾರ ಮೋದಿ ಅವರನ್ನು ನಾಲಾಯಕ್ ಎಂದು ಕರೆದಿದ್ದಾರೆ.
ಮೋದಿ ಮಳಖೇಡಕ್ಕೆ ಬಂದಾಗ ಬಂಜಾರಾ ಸಮಾಜದವರಿಗೆ ಏನು ಹೇಳಿದ್ರು? ಬಂಜಾರಾ ಸಮಾಜದ ಮಗ ದಿಲ್ಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು. ಆದರೆ ಇಂತಹ ನಾಲಾಯಕ್ ಮಗ ಇದ್ದರೆ ಹೇಗೆ ನಡೆಯುತ್ತೆ? ದೇಶ ನಡೆಸೋನು ಮಾತ್ರವಲ್ಲ, ಮನೆಯಲ್ಲಿ ಒಬ್ಬ ನಾಲಾಯಕ್ ಮಗನಿದ್ರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು.
ನಂತರ ಪ್ರಧಾನಿ ನರೇಂದ್ರ ಮೋದಿ ಕುರಿತು ನಾಲಾಯಕ್ ಮಗ ಎಂದು ಪ್ರಿಯಾಂಕ್ ಖರ್ಗೆ ಹೇಳಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಪಪಡಿಸಿದ್ದಾರೆ.









































