ರಣಹದ್ದು ಬಡಿದು ವಿಂಡೋ ಗ್ಲಾಸ್ ಪುಡಿಪುಡಿ
ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಜೊತೆಗೆ ಇಂದು ಕಾಂಗ್ರೆಸ್ನ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿದ್ದರು. ಅಲ್ಲಿಂದ ಮುಳುಬಾಗಿಲಿಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದ್ದು, ಪರಿಣಾಮವಾಗಿ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಯಾವುದೇ ಅನಾಹುತ ಸಂಭವಿಸಿಲ್ಲ. ಬಳಿಕ ಡಿ.ಕೆ.ಶಿವಕುಮಾರ್ ಹೆಚ್ಎಎಲ್ ಏರ್ಪೋರ್ಟ್ಗೆ ಹಿಂದಿರುಗಿದ್ದಾರೆ.


































