ಹಿಂದೂ ಯುವತಿಯೊಂದಿಗೆ ಮಾತನಾಡಿದ ಯುವಕನ ಮೇಲೆ ಹಲ್ಲೆ

ದಕ್ಷಿಣ ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ

ಮಂಗಳೂರು: ಪುತ್ತೂರಿನಲ್ಲಿ ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನಿಗೆ ಸ್ಥಳೀಯರು ಹಿಗ್ಗಾಮುಗ್ಗವಾಗಿ ಥಳಿಸಿದ ಘಟನೆ ನಡೆದಿದೆ. ಮಹಮ್ಮದ್ ಫಾರಿಶ್ (18) ಥಳಿತಕ್ಕೊಳಗಾದ ಯುವಕ.
ಪುತ್ತೂರಿನ ಮರೀಲ್ ಕಾಡುಮನೆ ನಿವಾಸಿ ಕೆ.ಇಬ್ರಾಹಿಂ ಅವರ ಪುತ್ರನಾಗಿರುವ ಮಹಮ್ಮದ್ ಫಾರಿಶ್, ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿದ್ದ. ಈ ವೇಳೆ ಸ್ಥಳೀಯ ಗುಂಪೊಂದು ಮಹಮ್ಮದ್ ಫಾರಿಶ್​ನನ್ನು ಪ್ರಶ್ನಿಸಿ ಹಿಗ್ಗಾಮುಗ್ಗ ಥಳಿಸಿದೆ. ಆತನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ಮಹಮ್ಮದ್ ಫಾರಿಶ್​ನಿಂದ ಮಾಹಿತಿ ಕಲೆಹಾಕಿದ್ದಾರೆ.
ಇತ್ತೀಚೆಗಷ್ಟೇ ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿತ್ತು. ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿಯಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಸ್​ಸ್ಟ್ಯಾಂಡ್​ನಲ್ಲಿ ಈ ಜೋಡಿ ಕಂಡು ಬಂದಿದೆ. ಬಳಿಕ ಕುಮಾರಧಾರಾ ಬಳಿ ಬಂದಾಗ ಗುಂಪೊಂದು ಯುವಕನನ್ನು ಥಳಿಸಿದೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆ ನೀಡಿದ ದೂರಿನ ಅನ್ವಯ ಯುವಕನ ವಿರುದ್ಧ ಸುಬ್ರಹ್ಮಣ್ಯ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದರು.











































































error: Content is protected !!
Scroll to Top