ಟ್ರಕ್ ಹಾಗೂ ಬೊಲೆರೊ ಡಿಕ್ಕಿ
ರಾಯ್ಪುರ : ಛತ್ತೀಸ್ಗಢದ ಧಮ್ತಾರಿ ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 10 ಸಾವಿಗೀಡಾಗಿದ್ದಾರೆ. ಟ್ರಕ್ ಹಾಗೂ ಬೊಲೆರೊ ನಡುವೆ ಡಿಕ್ಕಿ ಸಂಭವಿಸಿದೆ.
ಜಗತ್ರಾ ಎಂಬಲ್ಲಿ ಕಂಕೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ರಾಯ್ಪುರಕ್ಕೆ ರವಾನಿಸಲಾಗಿದೆ.
ಟ್ರಕ್ ಚಾಲಕನ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಅಪಘಾತದ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.





































