ಕಿಶ್ತ್ವಾರ್: ಭಾರತೀಯ ಸೇನೆಯ ಹೆಲಿಕಾಪ್ಟರ್ ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಪತನವಾದ ಘಟನೆ ಮೇ 4 ರಂದು ಸಂಭವಿಸಿದೆ. ಅಧಿಕಾರಿಗಳ ಪ್ರಕಾರ ಸೇನೆಯ ಎಎಲ್ಎಚ್ ಧ್ರುವ್ ಹೆಲಿಕಾಪ್ಟರ್ ಕಿಶ್ತ್ವಾರ್ ನ ಮಾರ್ವಾಹ್ ಎಂಬ ಪ್ರದೇಶದಲ್ಲಿ ಪತನವಾಗಿದೆ.
ಮೂವರು ಸೇನಾ ಅಧಿಕಾರಿಗಳು ಹೆಲಿಕಾಪ್ಟರ್ನಲ್ಲಿ ಹೋಗುತ್ತಿದ್ದು, ಅಪಘಾತದಲ್ಲಿ ಪೈಲಟ್‌ಗಳು ಗಾಯಗೊಂಡಿದ್ದಾರೆ, ಆದರೆ ಯಾವುದೇ ಜೀವಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಾರ್ಚ್ ನಲ್ಲಿ ಅರುಣಾಚಲ ಪ್ರದೇಶದ ಮಂಡಲಾ ಹಿಲ್ಸ್ ನಲ್ಲಿ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿತ್ತು. ಈ ಘಟನೆಯಲ್ಲಿ ಎರಡು ಪೈಲಟ್ ಗಳು ಅಸುನೀಗಿದ್ದರು.



































