ಕಾಂಗ್ರೆಸ್‌ ಪ್ರಣಾಳಿಕೆಗೆ ಪತ್ರಿಕಾಗೋಷ್ಠಿಯಲ್ಲಿ ಬೆಂಕಿಯಿಟ್ಟ ಈಶ್ವರಪ್ಪ

ಕಾಂಗ್ರೆಸ್‌ನದ್ದು ಮಹಮ್ಮದ್ ಅಲಿ ಜಿನ್ನಾ ಪ್ರಣಾಳಿಕೆ ಎಂದು ಲೇವಡಿ

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲೇ ಕಾಂಗ್ರೆಸ್​ನ ಪ್ರಣಾಳಿಕೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಇಂದು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್​​ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು. ಬಳಿಕ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್​​ನದ್ದು ರಾಷ್ಟ್ರದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್​ ಸರ್ಕಾರ ಪಿಎಫ್ಐ ಮೇಲಿದ್ದ 173 ಪ್ರಕರಣ​ಗಳನ್ನು ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ ಪಿಎಫ್‌ಐ ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್​ಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಬಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್​ ಸರ್ಕಾರ ಪಿಎಫ್‌ಐ ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ ಪಿಎಫ್‌ಐ ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್​ಗೆ ಗೊತ್ತಿಲ್ಲ. ಆಂಜನೇಯನ ಬಾಲಕ್ಕೆ ರಾವಣ ಬೆಂಕಿಯಿಟ್ಟ. ಆ ರಾವಣನ ಅಧಿಕಾರವೇ ನಾಶವಾಯ್ತು. ಇದೀಗ ಬಜರಂಗ ದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್​ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.
ಭಜರಂಗದಳ ರಾಷ್ಟ್ರಪ್ರೇಮಿ ಸಂಘಟನೆ. ಕಾಂಗ್ರೆಸ್ ಪ್ರಣಾಳಿಕೆ ಮಹಮ್ಮದ್ ಅಲಿ ಜಿನ್ನಾ ಪ್ರಣಾಳಿಕೆಯಾಗಿದೆ. ಈ ಪ್ರಣಾಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕುತ್ತೇನೆ ಎಂದು ಪ್ರಣಾಳಿಕೆಗೆ ಬೆಂಕಿಕೊಟ್ಟರು.







































































error: Content is protected !!
Scroll to Top