ಮೇ 6ರಂದು ಬೆಂಗಳೂರಿನಲ್ಲಿ ಮೋದಿ 36 ಕಿ.ಮೀ. ರೋಡ್‌ ಶೋ

ಹತ್ತು ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆ

ಬೆಂಗಳೂರು : ಈ ವಾರಾಂತ್ಯದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿರುವ ಮೋದಿ 36 ಕಿಲೋಮೀಟರ್‌ ಉದ್ದದ 2 ಬೃಹತ್‌ ರೋಡ್‌ ಶೋಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮೋದಿ ಮೇ 5 ರಂದು ರಾತ್ರಿ ಬೆಂಗಳೂರಿಗೆ ಬರಲಿದ್ದಾರೆ. ಮೇ 6 ರಂದು ನಗರದಲ್ಲಿ ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನ ಬಹೃತ್‌ ರೋಡ್‌ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಮೇ 7ರಂದು ರಾಜ್ಯದ ವಿವಿಧ ಜಾಗಗಳಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಮೋದಿ ಮಾತನಾಡಲಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಸಂಸದ ಪಿ.ಸಿ.ಮೋಹನ್ ʼಮೇ 6ರಂದು ಪ್ರಧಾನಿಯವರು ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ದೂರ ರೋಡ್ ಶೋ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ 10.1 ಕಿ.ಮೀ, ಸಂಜೆ 4ರಿಂದ ರಾತ್ರಿ 10 ರವರೆಗೆ 26.5 ಕಿ.ಮೀ ದೂರ ರೋಡ್ ಶೋ ನಡೆಯಲಿದ್ದು, ಹತ್ತು ಲಕ್ಷಕ್ಕೂ ಅಧಿಕ ಪಾಲ್ಗೊಳ್ಳುವ ನಿರೀಕ್ಷೆ ಇದೆʼ ಎಂದರು.

ಹೀಗೆ ಸಾಗಲಿದೆ ರೋಡ್‌ ಶೋ ಹಾದಿ

ಬೆಳಗ್ಗೆ ಸುರಂಜನ್‍ದಾಸ್ ರಸ್ತೆಯಿಂದ ಆರಂಭವಾಗುವ ಯಾತ್ರೆ, ಮಹದೇವಪುರ, ಕೆ.ಆರ್.ಪುರ, ಸಿ.ವಿ.ರಾಮನ್ ನಗರ, ಶಾಂತಿನಗರ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ. ಸಂಜೆ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭ ನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಗಾಂಧಿನಗರ, ವಿಜಯನಗರ, ಗೋವಿಂದರಾಜ ನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ ಕ್ಷೇತ್ರಗಳಲ್ಲಿ ರೋಡ್ ಶೋ ʼಪ್ರಧಾನಿಯವರು ಬೆಂಗಳೂರಿಗೆ ಬರುತ್ತಿರುವುದು ನಮಗೆಲ್ಲರಿಗೂ ಹಬ್ಬವಾಗಿದೆ. ಇದು ಬೆಂಗಳೂರಿಗೆ ಖುಷಿಯ ವಿಚಾರ. ನವ ಬೆಂಗಳೂರಿಗೆ ಪ್ರಧಾನಿಯವರು ಹಾಕಿರುವ ಅಡಿಪಾಯಕ್ಕಾಗಿ ಜನರು ಅವರನ್ನು ಹೂ ಮಳೆಯೊಂದಿಗೆ ಸ್ವಾಗತಿಸಲು ಕಾತರರಾಗಿದ್ದಾರೆʼ ಸಾಗಲಿದೆ ಎಂದು
ತೇಜಸ್ವಿ ಸೂರ್ಯ ಹೇಳಿದ್ದಾರೆ.
ʼಬೆಂಗಳೂರು ಬಿಜೆಪಿ ಭದ್ರಕೋಟೆಯಾಗಿದ್ದು, ಸಬರ್ಬನ್ ರೈಲು, ಉಪ ನಗರ ಟೌನ್ ಶಿಪ್ ವರ್ತುಲ ರಸ್ತೆ, ಮೆಟ್ರೋ ರೈಲು ಮಾರ್ಗ 70 ಕಿ.ಮೀಗೆ ವಿಸ್ತರಣೆ, 1,500 ಎಲೆಕ್ಟ್ರಿಕ್ ಬಸ್‍ಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್, ಯೂನಿಕಾರ್ನ್‍ಗೆ ಪ್ರೋತ್ಸಾಹ, ಪಿಎಂ ಆವಾಸ್ ಯೋಜನೆಯಡಿ 40 ಸಾವಿರ ಮನೆಗಳ ನಿರ್ಮಾಣ, ಸ್ವನಿಧಿ ಯೋಜನೆಯಡಿ ವ್ಯಾಪಾರಿಗಳಿಗೆ ಆರ್ಥಿಕ ನೆರವು, ಮೂರುವರೆ ವರ್ಷದಿಂದ ಉಚಿತ ಪಡಿತರ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ನರೇಂದ್ರ ಮೋದಿಯವರ ಸರ್ಕಾರ ನಗರಕ್ಕೆ ನೀಡಿದೆʼ ಎಂದು ಹೇಳಿದರು.







































































error: Content is protected !!
Scroll to Top