ಕಾರ್ಕಳ : ಅನಗತ್ಯ ಮಾತ್ರೆ ಸೇವಿಸಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೋಡುರಸ್ತೆಯಲ್ಲಿ ಸಂಭವಿಸಿದೆ. ಜಯಲಕ್ಷ್ಮಿ ನಾಯಕ್ (57) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಮೇ 3ರ ಬೆಳಗ್ಗೆ ಜಯಲಕ್ಷ್ಮಿ ನಾಯಕ್ ಅಸ್ವಸ್ಥಗೊಂಡು ವಾಂತಿ ಮಾಡುತ್ತಿದ್ದು ಚಿಕಿತ್ಸೆಗಾಗಿ ಕಾರ್ಕಳ ಡಾ.ಟಿ.ಎಂ.ಎ.ಪೈ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೇ 4 ರ ಬೆಳಗ್ಗೆ ಮೃತಪಟ್ಟಿದ್ದಾರೆ. ಮಗನ ಮದುವೆಯ ವಿಚಾರದಲ್ಲಿ ಚಿಂತೆಯಲ್ಲಿದ್ದ ಇವರು ಸಾಯುತ್ತೇನೆ ಎಂದು ಹೇಳಿದ್ದು, ಅನಗತ್ಯವಾಗಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಮೋಹನ್ ನಾಯಕ್ ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ
























