ಹಿಂದೂ ಧಾರ್ಮಿಕ ಕೇಂದ್ರದ ಅಭಿವೃದ್ಧಿ ಕಾಂಗ್ರೆಸ್ಸಿಗೆ ಬೇಕಿಲ್ಲ – ಮಹಾವೀರ ಹೆಗ್ಡೆ

ಕಾರ್ಕಳ : ಕಾರ್ಕಳದ ಪುರಾತನ ದೇಗುಲ ಶ್ರೀ ಮಾರಿಯಮ್ಮ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ, ಬ್ರಹ್ಮಕಲಶೋತ್ಸವ ಭಕ್ತರ, ಸರಕಾರದ ಸಹಕಾರದಿಂದ ವೈಭವಯುತವಾಗಿ ನೆರವೇರಿದೆ. ಆದರೂ ಕಾಂಗ್ರೆಸ್ಸಿಗರು ಇಷ್ಟು ದೊಡ್ಡ ದೇವಸ್ಥಾನ ಬೇಕಿತ್ತ ? ವೈಭವ ಬೇಕಿತ್ತ ಎಂದೆಲ್ಲ ದೇವಸ್ಥಾನದ ಅಭಿವೃದ್ಧಿಯನ್ನೇ ಪ್ರಶ್ನೆ ಮಾಡುತ್ತಿದ್ದಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯನ್ನು ಕಾಂಗ್ರೆಸ್ಸಿಗರಿಗೆ ಸಹಿಸಲಾಗುತ್ತಿಲ್ಲವೇ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ಸಿಗರ ಮನಸ್ಥಿತಿ ಅರ್ಥವಾಗುತ್ತಿಲ್ಲ
ಕಾಂಗ್ರೆಸ್ಸಿಗರ ಮನಸ್ಥಿತಿ ಹೇಗಿದೆ ಎಂದರೆ ಅಭಿವೃದ್ಧಿ ಆಗಿಲ್ಲ ಎಂದರೆ ಆಗಿಲ್ಲ ಎನ್ನುತ್ತಾರೆ. ಅಭಿವೃದ್ಧಿ ಮಾಡಿದಾಗ ಅದನ್ನು ಟೀಕಿಸುತ್ತಾರೆ. ಹಾಗಿದ್ದರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಕಾಂಗ್ರೆಸ್ಸಿಗರ ಮನಸ್ಥಿತಿ ಏನು ಎನ್ನುವುದೇ ಅರ್ಥವಾಗುತಿಲ್ಲ. ಒಂದು ಕಡೆ ಹಿಂದೂ ದೇವಸ್ಥಾನಗಳ ಅಭಿವೃದ್ಧಿ ಸಹಿಸದೇ ಟೀಕಿಸುವವರು ತಮ್ಮದೇ ಪಕ್ಷದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಗುಟ್ಟಾಗಿ ಮಸೀದಿ ಕಟ್ಟಿ ಕೊಡುತ್ತೇವೆ ಎನ್ನುತ್ತ ತಿರುಗಾಡುತ್ತಿದ್ದಾರೆ ಎಂದರು.

ನನ್ನಿಂದಾದುದು ಎಲ್ಲೂ ಹೇಳಿಲ್ಲ
ಮಾರಿಗುಡಿ ದೇವಸ್ಥಾನದ ಜೀರ್ಣೊದ್ಧಾರ, ಬ್ರಹ್ಮಕಲಶ ಸಂದರ್ಭ ಎಲ್ಲರೂ ಕೈ ಜೋಡಿಸಿದ್ದಾರೆ. ಅದರಲ್ಲಿ ನಮ್ಮ ಕಾರ್ಯಕರ್ತರು ಸೇರಿದ್ದರು. ಸಚಿವರು ನನ್ನಿಂದಲೆ ಆಗಿದೆ ಎಂದು ಎಲ್ಲಿಯೂ ಹೇಳಲಿಲ್ಲ. ಕಾಂಗ್ರೆಸ್ ನವರಿಗೆ ಟೀಕಿಸಲು ವಿಷಯವಿಲ್ಲದೇ ಇಂತಹ ವಿಚಾರಗಳನ್ನು ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೂ ಅಶ್ಲೀಲ ಎನ್ನುವ ಪದ ಬಳಕೆ ಮಾಡುವ ಕಾಂಗ್ರೆಸ್ಸಿಗರಿಗೆ ಹಿಂದೂ ಧಾರ್ಮಿಕ ಕೇಂದ್ರದ ಅಭಿವೃದ್ಧಿಯನ್ನು ಸಹಿಸಲು ಸಾಧ್ಯವಾಗುತಿಲ್ಲ, ಹಿಂದೂ ದೇಗುಲ ಅಭಿವೃದ್ಧಿ ಆಗುವುದು ಕಾಂಗ್ರೆಸ್ಸಿಗರಿಗೆ ಬೇಕಿಲ್ಲ ಎಂದ ಮಹಾವೀರ ಹೆಗ್ಡೆ ಮಂಗಳೂರು ಕುಕ್ಕರ್ ಬ್ಲಾಸ್ಟ್ ಆರೋಪಿಯನ್ನು ಅಮಾಯಕ ಎಂದು ಆ ಪಕ್ಷದ ಮುಖಂಡರೇ ಹೇಳುತ್ತಾರೆ. ಇನ್ನು ಧಾರ್ಮಿಕ ವಿಚಾರದಲ್ಲಿ ಅದೇ ಮಾನಸಿಕತೆಯುಳ್ಳ ಇಲ್ಲಿಯವರು ಟೀಕೆ ಮಾಡುವುದರಲ್ಲಿ ವಿಶೇಷವೇನಿಲ್ಲ. ಪ್ರತಿಯೊಂದರಲ್ಲೂ ಹುಳುಕು ಹುಡುಕುವ ಕಾಂಗ್ರೆಸ್ಸಿಗರಿಗೆ ಹಿಂದೂ ಧಾರ್ಮಿಕ ಕ್ಷೇತ್ರಗಳ ವೈಭವವನ್ನು ಅರಗಿಸಿಕೊಳ್ಳಲು ಆಗುತಿಲ್ಲ ಎಂದು ದೂರಿದರು.

















































error: Content is protected !!
Scroll to Top