ಇಂದು ಹುಬ್ಬಳ್ಳಿಯಲ್ಲಿ ಸೋನಿಯಾ ಪ್ರಚಾರ

ಕಾಂಗ್ರೆಸ್‌ ಅಧಿನಾಯಕಿ ಮೊದಲ ಬಾರಿ ಚುನಾವಣಾ ಕಣಕ್ಕೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದ ಅಖಾಡಕ್ಕೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಇಂದು ಪ್ರವೇಶಿಸಲಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಸೋನಿಯಾ ಹಾಗೂ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಬೃಹತ್‌ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರೋಡ್‌ ಶೋ ನಡೆಸಲಿದ್ದಾರೆ.
ರಾಜ್ಯದಲ್ಲಿ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಈಗಾಗಲೇ ಮಿಂಚಿನ ಸಂಚಾರ ನಡೆಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಶನಿವಾರ ಸಂಜೆ 5.30ಕ್ಕೆ ಹುಬ್ಬಳ್ಳಿ ನಗರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸೋನಿಯಾ ಗಾಂಧಿ ಭಾಗವಹಿಸಲಿದ್ದಾರೆ. ಈ ಚುನಾವಣೆಯಲ್ಲಿ ಇದು ಅವರ ಮೊದಲ ಪ್ರಚಾರ ಕಾರ್ಯಕ್ರಮವಾಗಿದೆ. ಇದೇ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಕೂಡ ಪಾಲ್ಗೊಳ್ಳಲಿದ್ದಾರೆ.

















































error: Content is protected !!
Scroll to Top