ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಅರ್ಜಿ ತಿರಸ್ಕೃತ

ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ

ಗುವಾಹಟಿ: ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿರುವ ಅಂಕಿತಾ ದತ್ತಾ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಸ್ಸಾಂ ಹೈಕೋರ್ಟ್ ತಿರಸ್ಕರಿಸಿದೆ.
ಅರ್ಜಿದಾರರಿಗೆ ಬಂಧನ ಪೂರ್ವ ಜಾಮೀನು ನೀಡುವುದು ಸೂಕ್ತವಲ್ಲ. ಆದ್ದರಿಂದ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಏ.26 ರಂದು ಹೈಕೋರ್ಟ್‌ಗೆ ಶ್ರೀನಿವಾಸ್, ದತ್ತಾ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು., ಆದರೆ ಅದನ್ನು ನ್ಯಾಯಾಲಯ ತಿರಸ್ಕರಿಸಿತು. ನಂತರ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಶ್ರೀನಿವಾಸ್ ಕಳೆದ ಆರು ತಿಂಗಳಿಂದ ತನಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ದತ್ತಾ ಗುವಾಹಟಿಯ ದಿಸ್‌ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ ಬೆಂಗಳೂರಿನ ನ್ಯಾಯಾಲಯ ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಗುವಾಹಟಿ ಪೊಲೀಸರ ಐವರು ಸದಸ್ಯರ ತಂಡ ಏ.23ರಂದು ಬೆಂಗಳೂರಿನ ಶ್ರೀನಿವಾಸ್ ಅವರ ಸಂಬಂಧಿಕರ ಮನೆಗೆ ನೋಟಿಸ್ ಅಂಟಿಸಿ ಮೇ 2 ರೊಳಗೆ ದಿಸ್‌ಪುರ ಪೊಲೀಸ್ ಠಾಣೆಯಲ್ಲಿ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಶ್ರೀನಿವಾಸ್‌ ವಿಚಾರಣೆಗೆ ಗೈರು ಹಾಜರಾಗಿದ್ದು, 10 ದಿನಗಳ ಕಾಲಾವಕಾಶ ಕೋರಿದ್ದಾರೆ.

















































error: Content is protected !!
Scroll to Top