ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEEB) ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಮೇ8ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ಮೂಲಕ ಪ್ರಕಟಿಸಲಿದೆ.
ಬೆಳಗ್ಗೆ 11ಕ್ಕೆ ಅಧಿಕೃತ ವೆಬ್ಸೈಟ್ ಅಲ್ಲಿ ಫಲಿತಾಂಶ ಪ್ರಕಟವಾಗಲಿದೆ. karresults.nic.in ಮತ್ತು kseab.karnataka.gov.in. ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಫಲಿತಾಂಶ ತಿಳಿದುಕೊಳ್ಳಬಹುದಾಗಿದೆ.
2023ರ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಾ.28ರಿಂದ ಏ.11ರವರೆಗೆ ನಡೆಸಿತ್ತು. ಕಳೆದ ಸಾಲಿನಲ್ಲಿ ಒಟ್ಟು 8,53,436 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಅದರಲ್ಲಿ 7,30,881 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರು.2022ರಲ್ಲಿ, ಹುಡುಗಿಯರು ಹುಡುಗರಿಗಿಂತ ಮುಂಚೂಣಿಯಲ್ಲಿದ್ದು, ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ 90.29 ರಷ್ಟು ದಾಖಲಾಗಿದ್ದರೆ, ಬಾಲಕರ ಉತ್ತೀರ್ಣ ಪ್ರಮಾಣ ಶೇ 81.30 ರಷ್ಟಿದೆ.
ಹತ್ತನೇ ತರಗತಿ ಪರೀಕ್ಷೆಯಲ್ಲಿ ಫೇಲ್ ಆದರೆ ಚಿಂತಿಸದೆ, ಧೃತಿಗೆಡದೆ ವಿದ್ಯಾರ್ಥಿಗಳು ಯಾವುದೇ ದುಡುಕು ನಿರ್ಧಾರವನ್ನು ತೆಗೆದುಕೊಳ್ಳಬಾರದು. ಅನುತ್ತೀರ್ಣರಾದರು ವಿದ್ಯಾರ್ಥಿಗಳಿಗೆ ಹಲವಾರು ಆಯ್ಕೆಗಳಿವೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಪ್ರಥಮವಾಗಿ ಭರವಸೆ ಕಳೆದುಕೊಳ್ಳದೆ ಪರಿಸ್ಥಿತಿಯನ್ನು ವಿಶ್ಲೇಷಿಸಿ, ನಂತರ ಪರ್ಯಾಯ ಶಿಕ್ಷಣ ಆಯ್ಕೆಗಳನ್ನು ಅನ್ವೇಷಿಸಿ, ಪೂರಕ ಪರೀಕ್ಷೆಗೆ ತಯಾರಿ ಪ್ರಾರಂಭಿಸಿ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ತಿಳಿಸಿದೆ.






































