ಮೇ8 ರಿಂದ ಬಹಿರಂಗ ಪ್ರಚಾರಕ್ಕೆ ತೆರೆ : ನಾಳೆ ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ

ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದೆ. ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಸಂಬಂಧ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಆದರೆ ಮೇ8ರ ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ. ಮತ ಎಣಿಕೆ ದಿನ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೂ ಮದ್ಯ ಸಿಗುವುದಿಲ್ಲ.

ಈ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ.

ಬಹಿರಂಗ ಪ್ರಚಾರ ಮುಗಿಸಿದ ಬಳಿಕ ಸ್ಟಾರ್​ ಪ್ರಚಾರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.







































































error: Content is protected !!
Scroll to Top