ಜ್ಞಾನಸುಧಾ : ಎಸ್ಎಸ್ಎಲ್‌ಸಿ ಫಲಿತಾಂಶ

ಕಾರ್ಕಳ: ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶ್ರಾವ್ಯ ಮತ್ತು ತ್ರಿಶಾ ಎ. ದೇವಾಡಿಗ 618 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಗಳಾಗಿದ್ದು, ಅನ್ವಿತಾ ನಾಯಕ್ 617 ಅಂಕದೊಂದಿಗೆ ದ್ವಿತೀಯ ಸ್ಥಾನ ಹಾಗೂ ಕೆ. ವಿಘ್ನೇಶ್‌ ಕಿಣಿ ಹಾಗೂ ಸ್ನೀಗ್ಧ ಯು. ಶೆಟ್ಟಿ613 ಅಂಕಗಳೊಂದಿಗೆ ತೃತೀಯ ಸ್ಥಾನಿಯಾಗಿದ್ದಾರೆ.
ಪರೀಕ್ಷೆಗೆ ಹಾಜರಾದ 99 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 5 ವಿದ್ಯಾರ್ಥಿಗಳು ಶೇ. 98ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು, 58 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, 20 ವಿದ್ಯಾರ್ಥಿಗಳು ಶೇ. 95ಕ್ಕಿಂತ ಅಧಿಕ ಹಾಗೂ 20 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಅಧಿಕ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

















































error: Content is protected !!
Scroll to Top