ಕಾರ್ಕಳ : 2022 -23 ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯು ಶೇ.94.39 ದಾಖಲಿಸಿಕೊಂಡಿದೆ. ಪರೀಕ್ಷೆಗೆ ಹಾಜರಾದ 107 ವಿದ್ಯಾರ್ಥಿಗಳ ಪೈಕಿ 101 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 11 ಮಂದಿ ವಿದ್ಯಾರ್ಥಿಗಳು ಎ+ ಗ್ರೇಡ್‌ನಲ್ಲಿ, 29 ವಿದ್ಯಾರ್ಥಿಗಳು ಎ ಗ್ರೇಡ್‌ನಲ್ಲಿ ತೇರ್ಗಡೆ ಹೊಂದಿರುತ್ತಾರೆ. ಆಂಗ್ಲ ಮಾಧ್ಯಮದಲ್ಲಿ ವೀಣಾ ಲಿಂಗರಾಜ ಗಾಣಿಗೇರ 612 ಹಾಗೂ ಕನ್ನಡ ಮಾಧ್ಯಮದಲ್ಲಿ ಅವನೀ ಉಪಾಧ್ಯ ಬಿ. 600 ಅಂಕಗಳನ್ನು ಪಡೆದಿದ್ದಾರೆ.
ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸ. ಪ್ರೌ. ಶಾಲೆಯ ಎಸ್ಎಸ್ಎಲ್‌ಸಿ ಫಲಿತಾಂಶ
























