ಸರ್ಕಾರದಿಂದ ತಲಾ 4 ಲ.ರೂ. ಪರಿಹಾರ ಘೋಷಣೆ
ಭೋಪಾಲ್ : ಪ್ರಯಾಣಿಕರ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ನಡೆದಿದೆ.
ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದೆ.



































