ನಿಮ್ಮ ಕನಸು ನನ್ನ ಸ್ವಂತ ಕನಸು, ನಿಮ್ಮ ಆಶಯ ನನ್ನ ಆಶಯ

ಚುನಾವಣೆ ಹೊಸ್ತಿಲಲ್ಲಿ ಕನ್ನಡಿಗರಿಗೆ ಪ್ರಧಾನಿ ಮೋದಿ ಸಂದೇಶ

ಹೊಸದಿಲ್ಲಿ : ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್‌ ಮೂಲಕ ಕರ್ನಾಟಕದ ಮತದಾರರಿಗೆ ಸಂದೇಶ ಕಳುಹಿಸಿದ್ದಾರೆ. ಬಹಿರಂಗ ಪ್ರಚಾರ ಅಂತ್ಯವಾಗಿರುವುದರಿಂದ ಎಚ್ಚರಿಕೆಯಿಂದ ಬಿಜೆಪಿ ಪರ ಪ್ರಚಾರ ಮಾಡದೆ, ಕನ್ನಡಿಗರಿಗೆ ಮತದಾನ ಜಾಗೃತಿ ಮೂಡಿಸುವ ಸಂದೇಶ ನೀಡಿದ್ದಾರೆ. “ಪ್ರತಿಯೊಬ್ಬ ಕನ್ನಡಿಗರ ಕನಸು ನನ್ನ ಸ್ವಂತ ಕನಸು, ನಿಮ್ಮ ಆಶಯ ನನ್ನ ಆಶಯ” ಎಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರದ 3.5 ವರ್ಷಗಳ ಅವಧಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. “ಬಿಜೆಪಿ ಸರ್ಕಾರದ ನಿರ್ಣಾಯಕ, ಕೇಂದ್ರೀಕೃತ ಮತ್ತು ಭವಿಷ್ಯದ ವಿಧಾನವು ಕರ್ನಾಟಕದ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದೆ” ಎಂದು ಹೇಳಿದ್ದಾರೆ.
ಬಂಡವಾಳ ಹೂಡಿಕೆ, ಕೈಗಾರಿಕೆ ಮತ್ತು ಆವಿಷ್ಕಾರದಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನ ಪಡೆಯಬೇಕು. ಶಿಕ್ಷಣ, ಉದ್ಯೋಗ, ಉದ್ಯಮಶೀಲತೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನ ಪಡೆಯಬೇಕು. ಕೃಷಿಯಲ್ಲಿಯೂ ಕರ್ನಾಟಕವನ್ನು ನಂಬರ್ ಒನ್ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಕರ್ನಾಟಕಕ್ಕೆ ಪರಂಪರೆ ಮತ್ತು ಸಾಂಸ್ಕೃತಿಕ ಸಾಮರ್ಥ್ಯವಿದೆ” ಎಂದು ಅವರು ಹೇಳಿದ್ದಾರೆ.
“ಕರ್ನಾಟಕವನ್ನು ನಂಬರ್ ಒನ್ ಮಾಡಲು, ಮೇ 10 ರಂದು ನಿಮ್ಮೆಲ್ಲರನ್ನೂ ಜವಾಬ್ದಾರಿಯುತ ನಾಗರಿಕರಾಗಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ” ಎಂದು ಪ್ರಧಾನಿ ಹೇಳಿದ್ದಾರೆ.





























































































































error: Content is protected !!
Scroll to Top