ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ಆರೋಪ : ಮಹಿಳಾ ಇನ್ಸ್​​ಪೆಕ್ಟರ್​ ಅಮಾನತು

ಬೆಂಗಳೂರು: ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ಆರೋಪ ಹಿನ್ನೆಲೆ ಮಹಿಳಾ ಇನ್ಸ್​​ಪೆಕ್ಟರ್​​ ಅಮಾನತು ಆದೇಶವನ್ನು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯಿಂದ ಆದೇಶ ಹೊರಡಿಸಲಾಗಿದೆ. ಭವ್ಯಾ ಅಮಾನತುಗೊಳಗಾದ ಮಹಿಳಾ ಇನ್ಸ್​​ಪೆಕ್ಟರ್​. ಮಂಗಳವಾರ ಅಂಬೇಡ್ಕರ್​ ವಿಶ್ವವಿದ್ಯಾಲಯದಲ್ಲಿ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತರಬೇತಿಗೆ ಹಾಜರಾಗದೆ ಇನ್ಸ್​ಪೆಕ್ಟರ್ ಭವ್ಯ ಪೇಪರ್ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ಮೆರೆದಿದ್ದಾರೆ ಎನ್ನಲಾಗಿದೆ. ನಾನು ಮಾಡುತ್ತಿರುವುದು ಸರಿ, ತರಬೇತಿ ಕೊಡುವುದು ನಿಮ್ಮ ಕೆಲಸ. ಆದರೆ ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ ಎಂದಿದ್ದಾರೆ.
ನೀವು ಹೇಳಿದಂತೆ ಕೇಳುವುದಕ್ಕೆ ನಾನು ನಿಮ್ಮ ಡಿಪಾರ್ಟ್ಮೆಂಟ್ ಅಲ್ಲ. ಈ ತರಬೇತಿ ಉಪಯೋಗಕ್ಕಿಲ್ಲ. ಯಾರಿಗಾದರೂ ಹೇಳಿಕೊಳ್ಳಿ ಎಂದಿದಕ್ಕೆ ಬಿಬಿಎಂಪಿ ಆಯುಕ್ತರಿಗೆ ಅಧಿಕಾರಿಗಳು ವಿಷಯ ತಿಳಿಸಿದ್ದಾರೆ. ಈ ಹಿನ್ನಲೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಅಮಾನತುಗೊಳಿಸಲಾಗಿದೆ.

















































error: Content is protected !!
Scroll to Top