ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದ ಬಾದಂ ಕುಟುಂಬ
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಒಂದೇ ಕುಟುಂಬದ 65 ಜನ ಏಕಕಾಲಕ್ಕೆ ಮತದಾನ ಮಾಡುವ ಮೂಲಕ ಪ್ರಜಾತಂತ್ರ ಹಬ್ಬವನ್ನು ಸಂಭ್ರಮಿಸಿದ್ದಾರೆ. ಇಲ್ಲಿನ ʼಬಾದಂʼ ಕುಟುಂಬವು ಚಿಕ್ಕಬಳ್ಳಾಪುರದ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ 161ನೇ ಮತಗಟ್ಟೆಯಲ್ಲಿ ಮತ ಚಲಾಯಿಸಿದೆ. ಪ್ರತಿ ಬಾರಿಯೂ ಎಲ್ಲರೂ ಒಂದಾಗಿ ಮತ ಚಲಾಯಿಸುವುದು ಈ ಕುಟುಂಬದ ವಿಶೇಷ.
























