ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಸಲಗರ ಬಸಂತಪುರ ಗ್ರಾಮದ ರಾಮು ರಾಠೋಡ್(45) ಮೃತ ದುರ್ದೈವಿ. ರಾಮು ನಿನ್ನೆ (ಮೇ.10) ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು. ನಿನ್ನೆ ರಾತ್ರಿ ಮನೆಗೆ ಬಂದಿರಲಿಲ್ಲ. ಇಂದು (ಮೇ.11) ಇಂದು ಮುಂಜಾನೆ ತಾಂಡಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ರಾಮು ಅವರನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಕುಟುಂಬದಸ್ಥರು ಆರೋಪ ಮಾಡಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.











































error: Content is protected !!
Scroll to Top