ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸದವರಿಗೆ ಅಂತಿಮ ಅವಕಾಶ : ಮೇ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಕಾರ್ಕಳ : 2023ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸುಗಳ ಸರಕಾರಿ ಸೀಟುಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು. ಆದಾಗ್ಯೂ ಕೆಲವು ಪೋಷಕರು ಹಾಗು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಸಿಇಟಿ-2023ಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕೊನೆಯ ಹಾಗು ಅಂತಿಮ ಅವಕಾಶವನ್ನು ನೀಡಿದ್ದು, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‌ಸಿ (ನರ್ಸಿಂಗ್‌) ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಇಲ್ಲಿಯವರೆಗೆ ಸಿಇಟಿ-2023ಕ್ಕೆ ನೊಂದಣಿ ಮಾಡದಿರುವ ಅಥವಾ ನೊಂದಣಿ ಮಾಡಿ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ದಿನಾಂಕ ಮೇ 11 ಬೆಳಿಗ್ಗೆ 8 ಗಂಟೆಯಿಂದ ಮೇ 13ರ ಬೆಳಿಗ್ಗೆ 11 ರವರೆಗೆ ಅರ್ಜಿ ಸಲ್ಲಿಸಲು ಹಾಗೂ ಮೇ 13 ರ ಸಂಜೆ 6 ಗಂಟೆಯೊಳಗೆ ಶುಲ್ಕವನ್ನು ಪಾವತಿಸಲು ಸೂಚಿಸಿದೆ.

ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.in ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಹಾಗು ಇತರೆ ವಿವರಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಮೇಲಿನ ದಿನಾಂಕಗಳಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸ ಬಹುದಾಗಿದೆ. ಸಿಇಟಿ-2023ಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

















































error: Content is protected !!
Scroll to Top