ಮೈತ್ರಿಗೆ ಕುಮಾರಸ್ವಾಮಿ ಸಂದೇಶ ರವಾನೆ

ಅತಂತ್ರ ಫಲಿತಾಂಶ ಬಂದರೆ ಕಿಂಗ್‌ ಮೇಕರ್‌ ಆಗಲು ರೆಡಿ

ಬೆಂಗಳೂರು: ಕೆಲವು ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ಸ್ಥತಿ ಸೃಷ್ಟಿಯಾಗುವ ಕುರಿತು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಕಿಂಗ್‌ ಮೇಕರ್‌ ಆಗಲು ಮುಂದಾಗಿರುವ ಜೆಡಿಎಸ್‌ ನಾಯಕ ಕುಮಾರಸ್ವಾಮಿ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಮೈತ್ರಿಯ ಸಂದೇಶ ರವನಿಸಿದ್ದಾರೆ.
ಬಹುಮತ ಬರದಿದ್ದರೆ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ ಮತ್ತು ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಿರುವ ಕುಮಾರಸ್ವಾಮಿ, ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ.
ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ತಿಳಿಸಿವೆ. ಆದ್ರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂಬ ಸಂದೇಶವನ್ನು ಎರಡೂ ಪಕ್ಷಗಳಿಗೆ ರವಾನಸಿದ್ದಾರೆ.
ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018)ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳನ್ನು ನೆನಪಿಟ್ಟುಕೊಂಡು ಈ ಶಲ ಆರಂಭದಲ್ಲೇ ಪಟ್ಟುಗಳನ್ನು ಹಾಕುತ್ತಿದ್ದಾರೆ.
ಮುಖ್ಯಮಂತ್ರಿಯಾಗಿ ತನಗೆ ಸರ್ಕಾರ ನಡೆಸಲು ಸ್ವಾತಂತ್ರ್ಯ ಇರಬೇಕು, ಯಾರೂ ಅಪ್ಪಣೆಗಳನ್ನು ಕೊಡಬಾರದು, ಯಾರೂ ಹಿಡಿತ ಸಾಧಿಸ ಮುಂದಾಬಾರದು ಎಂಬುದು ಕುಮಾರಸ್ವಾಮಿಯವರ ಮೊದಲ ಷರತ್ತು. ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂಬುದು ಕುಮಾರಸ್ವಾಮಿ ಇಂಗಿತ.
ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೆಗೌಡರು ಸಮ್ಮಿಶ್ರ ರಚನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ.

















































error: Content is protected !!
Scroll to Top