ಕಾಡಾನೆ ದಾಳಿಗೆ ಗಾಯಗೊಂಡಿದ್ದ ಕಾರ್ಮಿಕ ಬಲಿ

ಮಡಿಕೇರಿ : ಕಳೆದ ಎರಡು ದಿನಗಳ ಹಿಂದೆ ಪಾಲಿಬೆಟ್ಟದ ಮಸ್ಕಲ್ ಕಾಫಿ ತೋಟದಲ್ಲಿ ಬಾಬಿ (58) ಮತ್ತು ಇನ್ನಿತರ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ಈ ಸಂದರ್ಭ ಕಾಡಾನೆಯ ನೇರ ದಾಳಿಗೆ ಸಿಲುಕಿದ ಬಾಬಿ ಅವರ ಎದೆ ಮತ್ತು ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಇವರನ್ನು ತಕ್ಷಣ ಸಮೀಪದ ಆರಐಹೆಚ್‌ಪಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಬಿ ಗುರುವಾರ ಮೃತಪಟ್ಟಿದ್ದಾರೆ. ಘಟನೆಯ ಕುರಿತು ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರದಂದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ತೋಟದಲ್ಲಿರುವ ಆನೆಗಳನ್ನು ಅರಣ್ಯಕ್ಕೆ ಅಟ್ಟಿ ಎಂದು ಅಕ್ರೋಶ ವ್ಯಕ್ತಪಡಿಸಿದ್ದರು. ಪಾಲಿಬೆಟ್ಟ, ವ್ಯಾಪ್ತಿಯ ಹಲವೆಡೆಗಳಲ್ಲಿ ಕಾಡಾನೆಗಳು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾರ್ಮಿಕರು ನಿರಂತರವಾಗಿ ಇವುಗಳ ದಾಳಿಗೆ ಒಳಗಾಗುವ ಘಟನೆಗಳು ನಡೆಯುತ್ತಿವೆ. ಇದರಿಂದ ತೊಟಗಳಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸಲು ಹಿಂದೇಟು ಹಾಕುವ ಪರಿಸ್ಥಿತಿ ಇದೆ. ಈ ಹಿನ್ನೆಲೆ ತೋಟಗಳಲ್ಲಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಹಲವು ಗ್ರಾಮಸ್ಥರು ಅರಣ್ಯ ಇಲಾಖಾ ಅಧಿಕಾರಿಗಳನ್ನು ಆಗ್ರಹಿಸಿದ್ದರು.











































































error: Content is protected !!
Scroll to Top