ಜಲ್ಲಿಕಟ್ಟು ಕ್ರೀಡೆಗೆ ಸಮ್ಮತಿ ಸೂಚಿಸಿದ ಸುಪ್ರೀಂಕೋರ್ಟ್‌

ಕರ್ನಾಟಕದ ಕಂಬಳಕ್ಕೂ ರಿಲೀಫ್‌

ದೆಹಲಿ : ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಸಾಂಪ್ರಾದಾಯಿಕ ಜಲ್ಲಿಕಟ್ಟು ಕ್ರೀಡೆಯಲ್ಲಿ ಪ್ರಾಣಿಗಳನ್ನು ಹಿಂಸಿಸಲಾಗುತ್ತಿದೆ ಎನ್ನುವ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದ್ದರಿಂದ ಜಲ್ಲಿಕಟ್ಟು ಕ್ರೀಡೆಯನ್ನು ಪ್ರಶ್ನಿಸಿ ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿ ಸುಪ್ರಿಂ ಕೋರ್ಟ್‌ನ ಸಾಂವಿಧಾನಿಕ ಪೀಠ ಮೇ 18ರಂದು ತನ್ನ ತೀರ್ಪು ನೀಡಿದ್ದು, ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನೀಡಿ ಎಂದು ಕೇಳಿಕೊಂಡಿದ್ದ ತಮಿಳುನಾಡು ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಜಲ್ಲಿಕಟ್ಟುನೊಂದಿಗೆ ಕರ್ನಾಟಕದ ಕಂಬಳ ಮತ್ತು ಮಹಾರಾಷ್ಟ್ರದ ಎತ್ತಿನ ಗಾಡಿ ಓಟದ ಸಿಂಧುತ್ವವನ್ನು ಎತ್ತಿ ಹಿಡಿದಿದ್ದು, ಈ ರಾಜ್ಯಗಳಿಗೂ ರಿಲೀಫ್ ಸಿಕ್ಕಿದೆ. ಆದರೆ ಈ ಹಿಂದೆ ಮಾಡಲಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದೆ.

ಪ್ರಾಣಿ ಹಕ್ಕುಗಳ ಸಂರಕ್ಷಣ ಸಂಸ್ಥೆ ಪೆಟಾ ಜಲ್ಲಿಕಟ್ಟು ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಎಂ ಜೋಸೆಫ್, ಅಜಯ್‌ ರಸ್ತೋಗಿ, ಅನಿರುದ್ಧ ಬೋಸ್‌, ಹೃಷಿಕೇಶ್‌ ರಾಯ್‌ ಮತ್ತು ಸಿ.ಟಿ. ರವಿಕುಮಾರ್‌ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ. ಈ ವೇಳೆ ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನೀಡಿ ಎಂದು ತಮಿಳುನಾಡು ಸರ್ಕಾರದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುವ ಮೂಲಕ, ಈ ಸ್ಪರ್ಧೆಗೆ ಒಪ್ಪಿಗೆ ನೀಡಿದೆ.











































































error: Content is protected !!
Scroll to Top