ಸುಳ್ಯ ಬಿಜೆಪಿ ಮುಖಂಡ ಹೊಳೆಗೆ ಬಿದ್ದು ಸಾವು

ಸುಳ್ಯ : ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.



















































error: Content is protected !!
Scroll to Top