ಗೆಲುವಿಗೆ ಬೀಗಬೇಡಿ, ಲೋಕಸಭೆ ಚುನಾವಣೆ ಇದೆ

ಕಾಂಗ್ರೆಸ್‌ಗೆ ಪ್ರಶಾಂತ್‌ ಕಿಶೋರ್‌ ಎಚ್ಚರಿಕೆ

ಹೊಸದಿಲ್ಲಿ : ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ, ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ವಿಪಕ್ಷಗಳನ್ನು ಎಚ್ಚರಿಸಿದ್ದಾರೆ.
ಕರ್ನಾಟಕದಲ್ಲಿ ನಿಚ್ಚಳ ಬಹುಮತ ಸಿಕ್ಕಿದೆ ಎಂದು ಬೀಗಬೇಡಿ. ಒಂದು ರಾಜ್ಯದಲಿ ಗೆದ್ದಿರಬಹುದು. ಆದರೆ ಲೋಕಸಭೆಯ ಲೆಕ್ಕಾಚಾರಗಳೇ ಬೇರೆ ಇರುತ್ತವೆ. 2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ವಿಧಾನಸಭಾ ಚುನಾವಣೆ ವಿಜಯ ಸೋಪಾನ ಎಂದು ತಪ್ಪಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
2013ರಲ್ಲಿ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದರೂ 2014ರ ಸಂಸತ್ತಿನ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಸೋಲು ಕಂಡಿತ್ತು. ಒಂದು ವರ್ಷದ ಹಿಂದೆ ಮೂರು ಪ್ರಮುಖ ರಾಜ್ಯಗಳಲ್ಲಿ ಗೆದ್ದ ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋತಿತ್ತು ಎಂಬುದನ್ನು ನೆನಪಿಸಿದ್ದಾರೆ.
2012 ರಲ್ಲಿ ಸಮಾಜವಾದಿ ಪಕ್ಷ ಉತ್ತರ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಎರಡು ವರ್ಷಗಳ ನಂತರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಗೆದ್ದುಕೊಂಡ ಉದಾಹರಣೆಯನ್ನು ಅವರು ನೀಡಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ತನ್ನ ಯಶಸ್ಸನ್ನು ನೆನಪಿಟ್ಟುಕೊಳ್ಳುವುದು ಒಳ್ಳೆಯದು, ಅದರ ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಈ ರಾಜ್ಯಗಳಲ್ಲಿ ಅದರ ಶೋಚನೀಯ ಪ್ರದರ್ಶನ ತೋರಿತು ಎಂಬುದನ್ನು ನೆನಪಿಸಿದ್ದಾರೆ.



















































































error: Content is protected !!
Scroll to Top