ಪುತ್ತೂರಿನಲ್ಲಿ ಪೊಲೀಸರಿಂದ ದೌರ್ಜನ್ಯ – ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯಕ್ಕೆ ಕಾರಣರಾದ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಎಸ್ಪಿ ಆದೇಶ ಹೊರಡಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಘಟನೆಗೆ ಕಾರಣರಾದ ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಹರ್ಷಿತ್ ಅವರನ್ನು ಅಮಾನತ್ತುಗೊಳಿಸಿದ್ದು, ಪುತ್ತೂರು ಡಿವೈಎಸ್ಪಿ ವಿರುದ್ದ ಇಲಾಖಾ ಶಿಸ್ತುಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ವರದಿ ಮಾಡಲಾಗಿದೆ. ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಚಕ್ರವರ್ತಿ ಸೂಲಿಬೆಲೆ ಭೇಟಿ
ಮೇ 18 ರಂದು ಬೆಳಿಗ್ಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಪುತ್ತೂರಿಗೆ ಆಗಮಿಸಿದ್ದು, ಗಂಭೀರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಅರುಣ್ ಪುತ್ತಿಲಗೆ ಯತ್ನಾಳ್ ಕರೆ
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಇಂದು ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಕರೆ ಮಾಡಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ ಆಗದಿದ್ದರೆ ನಾಳೆ ಪುತ್ತೂರಿಗೆ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದಿದ್ದರು.

ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್ ಸಿಂಹ
ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ. ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ…. ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.

ಲಾಕ್ ಅಪ್ ಡೆತ್ ಆಗುವ ಸಾಧ್ಯತೆಯಿತ್ತು…!
ಪೊಲೀಸರ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿರುವ ಆರೋಪಿ ಅವಿನಾಶ್, ರಾತ್ರಿ ವೇಳೆ ಅರುಣಣ್ಣ ಠಾಣೆಗೆ ಬಾರದೇ ಇರುತ್ತಿದ್ದರೇ ನಮ್ಮ ಲಾಕಪ್ ಡೆತ್ ಆಗುತ್ತಿತ್ತು ಎಂದಿದ್ದಾರೆ.

ಆಸ್ಪತ್ರೆಯಲ್ಲಿ ಅವಿನಾಶ್‌ ಮಾತು👇

https://fb.watch/kBF-02Njvt/?mibextid=RUbZ1f

ತಾಲಿಬಾನ್ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ
ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ, ಹಿಂದೂ ಸಮಾಜದ ಕಾರ್ಯಕರ್ತರ ಮೇಲಾಗಿರುವ ಈ ದೌರ್ಜನ್ಯ ತಾಲಿಬಾನ್ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



















































error: Content is protected !!
Scroll to Top