ಗುಜರಾತ್ : ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ಅವರ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ನಡೆದಿದೆ. ಈ ಅಪಘಾತ ಗುರುವಾರ ರಾತ್ರಿ ಸಂಭವಿಸಿದೆ ಎಂದು ವಂಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮ್ಮ ಗ್ರಾಮದಿಂದ ಸಾವರಕುಂಡ್ಲಾಗೆ ಹಿಂತಿರುಗುತ್ತಿದ್ದಾಗ ವಂಡಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅವರ ಜತೆಗೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವಲ್ಲಭಭಾಯಿ ವಘಾಸಿಯಾ ಚಲಾಯಿಸುತ್ತಿದ್ದ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ಆಸ್ಪತ್ರೆಯಲ್ಲಿ ಜಮಾಯಿಸಿದ್ದಾರೆ.

ವಘಾಸಿಯಾ (69) ಅವರು ಸಾವರಕುಂಡ್ಲಾ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಶಾಸಕರಾಗಿದ್ದರು, ವಿಜಯ್ ರೂಪಾನಿ ಸರಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.





































