ಬೆಂಗಳೂರು : ಚುನಾವಣಾ ಪ್ರಚಾರ ಸಂದರ್ಭ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡುತ್ತೇವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಹೇಳಿದರು
ಇಂದು ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ 5 ಪ್ರಮುಖ ಗ್ಯಾರಂಟಿಗಳನ್ನು ಇವತ್ತಿನ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
ರಾಹುಲ್ ಗಾಂಧಿ ಆರಂಭಿಸಿದ ಭಾರತ ಜೋಡೊ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯ್ತು. ರಾಷ್ಟ್ರೀಯ ನಾಯಕರು ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಪಕ್ಷದ ಶ್ರೇಯಸ್ಸಿಗೆ ಕಾರಣರಾದ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯದ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದರು.






















