ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮೇ 22 ರಿಂದ 24 ರವರೆಗೆ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರದಿಂದ ಒಟ್ಟು ಮೂರು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು.

ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್
ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ಚುನಾವಣಾ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾವು ನೀಡಿದ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಇದರಿಂದ ಹಿಂದೆ ಸರಿಯುವುದಿಲ್ಲ. ಕಟ್ಟು ನಿಟ್ಟಾಗಿ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿ ಜಾರಿ ಮಾಡಲಾಗುವುದು ಎಂದರು.











































































error: Content is protected !!
Scroll to Top