ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ. ಕೆ. ಶಿವಕುಮಾರ್‌ ಅಧಿಕಾರ ಸ್ವೀಕಾರ

ಬೆಂಗಳೂರು : ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ 20 ರಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು. ಇದರೊಂದಿಗೆ, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಪ್ರಿಯಾಂಕಾ ವಾದ್ರಾ, ರಾಹುಲ್‌ ಗಾಂಧಿ ಆಗಮಿಸಿದ್ದಾರೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಆಗಮಿಸಿದ್ದರು. ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು.

ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರೆ, ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಎಂಟು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ
ಸಚಿವರಾಗಿ ಡಾ.ಜಿ ಪರಮೇಶ್ವರ್, ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕಾ ಖರ್ಗೆ, ಜಮೀರ್ ಅಹ್ಮದ್ ಖಾನ್ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.











































































error: Content is protected !!
Scroll to Top