ಸಂಪುಟ ಸಭೆಯಲ್ಲಿ ಚರ್ಚೆ
ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿವೆ ಎನ್ನಲಾಗಿರುವ ಎಲ್ಲ ಹಗರಣಗಳ ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ಪಿಎಸ್ಐ ಹಗರಣ, ಗುತ್ತಿಗೆದಾರರ ಮೇಲೆ ಲಂಚದ ಒತ್ತಡ ಮುಂತಾದ ಹಲವಾರು ಆರೋಪಗಳನ್ನು ಮರು ತನಿಖೆ ನಡೆಸಲಾಗುವುದು ಎಂದು ಹೇಳಿದರು.
ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಹಳೆಯ ಪ್ರಕರಣಗಳ ತನಿಖೆ ನಡೆಸುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದರು. ಇದರಂತೆ ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.









































