ಹೈಕೋರ್ಟ್ನ ಹಿರಿಯ ವಕೀಲ
ಬೆಂಗಳೂರು: ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಎಜಿ ಆಯ್ಕೆ ಅಧಿಕಾರವನ್ನು ಸಿಎಂಗೆ ನೀಡಲಾಗಿತ್ತು. ಅದರಂತೆ ಹೈಕೋರ್ಟ್ನ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ಅವರು ಇತ್ತೀಚಿಗೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ಎಜಿ ಸ್ಥಾನಕ್ಕೆ ಇದೀಗ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಶಶಿಕಿರಣ್ ಶೆಟ್ಟಿ ಕಾಂಗ್ರೆಸ್ ಶಾಸಕರ ಅನರ್ಹತೆ ಪ್ರಕರಣ ಸೇರಿದಂತೆ ಹಲವು ಮಹತ್ವದ ಪ್ರಕರಣಗಳನ್ನು ಅವರು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಶಶಿಕಿರಣ ಶೆಟ್ಟಿ ತಮ್ಮನ್ನು ನೇಮಕ ಮಾಡಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.





































