ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ – ಪ್ರಯಾಣಿಕರಿಗೆ ಗಾಯ
ಅಜೆಕಾರು : ಶಿರಸಿ ಸಿದ್ಧಾಪುರ ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರಕ್ಕೆ ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ತಾಲೂಕು ಅಂಡಾರು ಗ್ರಾಮದ ಚೌಖಿ ಸೇತುವೆ ಬಳಿ ಅಪಘಾತಕ್ಕೀಡಾಗಿ ಐವರು ಗಾಯಗೊಂಡ ಘಟನೆ ನಡೆದಿದೆ. ಮೇ 22 ರ ಮುಂಜಾನೆ 3:30 ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಜೀಪು ಮರಕ್ಕೆ ಡಿಕ್ಕಿಯಾಗಿದ್ದು, ಪರಿಣಾಮ ವಾಹನದಲ್ಲಿದ್ದ ಓರ್ವ ಮಗು, ಇಬ್ಬರು ಮಹಿಳೆಯರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಬೊಲೆರೋದಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿ ಉದಯ ಹಾಗೂ ವರಂಗ ಗ್ರಾ. ಪಂ. ಸದಸ್ಯ ಸಂತೋಷ್ ಅಮೀನ್ ಅವರು 108 ಆಂಬುಲನ್ಸ್ಗೆ ಕರೆ ಮಾಡಿ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಗಾಯಾಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿದ್ರೆಯ ಮಂಪರಿನಿಂದ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.






































