ಒಂದು ವರ್ಷದಲ್ಲಿ ಸರಕಾರ ಪತನ : ಅಣ್ಣಾಮಲೈ ಭವಿಷ್ಯಕ್ಕೆ ಕಾಂಗ್ರೆಸ್‌ ಲೇವಡಿ

ಸಿದ್ದರಾಮಯ್ಯ-ಡಿಕೆಶಿ ಜಗಳವಾಡದೆ ಆಡಳಿತ ನಡೆಸಿದರೆ ನೋಬೆಲ್‌ ಶಾಂತಿ ಪ್ರಶಸ್ತಿ ಕೊಡಬಹುದು ಎಂದು ಅಣ್ಣಾಮಲೈ

ಬೆಂಗಳೂರು: ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಭವಿಷ್ಯ ನುಡಿದಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ನಾಯಕರು ತಮಗಿರುವ ಬಹುಮತವನ್ನು ತೋರಿಸಿ ಅಣ್ಣಾಮಲೈಯನ್ನು ಲೇವಡಿ ಮಾಡಿದ್ದಾರೆ.
ಮಾಧ್ಯಮ ಸಂದರ್ಶನವೊಂದರಲ್ಲಿ ಅಣ್ಣಾಮಲೈ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಸರ್ಕಾರದ ಅವಧಿಯಲ್ಲಿ ಜಗಳವಾಡದೆ ಇದ್ದರೆ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗುವುದು ಎಂದು ಕರ್ನಾಟಕ ಚುನಾವಣಾ ಉಸ್ತುವಾರಿಯೂ ಆಗಿದ್ದ ವ್ಯಂಗ್ಯವಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್‌ ಎರಡು ಬಣವಾಗಿ ವಿಭಜನೆಯಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ತಮ್ಮದೇ ಆದ ಗುಂಪುಗಳನ್ನು ಕಟ್ಟಿಕೊಂಡು ಅವರ ಬೆಂಬಲವನ್ನು ಹೊಂದಿದ್ದಾರೆ. ಈ ನಡೆ ಆಡಳಿತವನ್ನು ನಿರ್ಲಕ್ಷಿಸಲು ಕಾರಣವಾಗುತ್ತದೆ.ನಮುಂದಿನ ವರ್ಷ ಕರ್ನಾಟಕದ ಹೊಸ ಸರ್ಕಾರ ಇಸ್ಪೀಟ್‌ ಕಾರ್ಡ್‌ಗಳ ರೀತಿಯಲ್ಲಿ ಪತನವಾಗುವುದು ಖಚಿತ ಅಂತ ಅಣ್ಣಾಮಲೈ ಭವಿಷ್ಯ ನುಡಿದಿದ್ದಾರೆ.
ಇವರ ಸಚಿವ ಸಂಪುಟದಲ್ಲಿರುವ ಯಾವುದೇ ಸಚಿವರಿಗೆ ಯಾವುದಕ್ಕೂ ಹೊಣೆಗಾರಿಕೆ ಇರುವುದಿಲ್ಲ. ಈ ರೀತಿಯ ಪರಿಸ್ಥಿತಿ ಆಡಳಿತದಲ್ಲಿ ಅವ್ಯವಸ್ಥೆಗೆ ಕಾರಣವಾಗುತ್ತದೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವಿನ ಅಸಹಜ ಬಾಂಧವ್ಯವನ್ನು ಬಿಂಬಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿಕೆಶಿ ಶಿವಕುಮಾರ್ ಜಗಳವಾಡದೆ ಅಧಿಕಾರ ಅವಧಿಯನ್ನು ಮುಗಿಸಿದರೆ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು. ಬಿಜೆಪಿ ವಿರೋಧಿ ಪಕ್ಷ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಂದಿರೋದನ್ನು ನೋಡಿದ್ದೇವೆ. ಇವರ ಒಗ್ಗಟ್ಟು ಬೆಂಗಳೂರಿನಲ್ಲಿ ಔತಣಕೂಟಕ್ಕೆ ಮಾತ್ರ ಸೀಮಿತವಾಗಿದೆ ಎಂದು ಟೀಕಿಸಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಸರ್ಕಾರವನ್ನು ಆಡಳಿತದಿಂದ ಕೆಳಗಿಳಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಕೇಸರಿ ಪಕ್ಷ 66 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಇನ್ನ ರಾಜ್ಯದ ಹಳೆಯ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ 19 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.





































error: Content is protected !!
Scroll to Top