ಇಂದಿನಿಂದ ಮೂರು ದಿನ ಅಧಿವೇಶನ

ಶಾಸಕರ ಪ್ರಮಾಣ ವಚನ, ಸ್ಪೀಕರ್‌ ಆಯ್ಕೆಗೆ ಸೀಮಿತ

ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ, ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇಂದು ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆರ್​.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌
ಸದಸ್ಯರ ಪ್ರಮಾಣ ವಚನ ಸ್ವೀಕಾರದ ಜತೆಗೆ ಸ್ಪೀಕರ್​ ಆಯ್ಕೆ ಹಿನ್ನೆಲೆಯಲ್ಲಿ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಸ್ಪೀಕರ ಸ್ಥಾನಕ್ಕೆ ಹಿರಿಯ ನಾಯಕರಾದ ಆರ್​.ವಿ ದೇಶಪಾಂಡೆ, ಹೆಚ್​.ಕೆ ಪಾಟೀಲ್​​ ಹಾಗೂ ಟಿ.ಬಿ ಜಯಚಂದ್ರ ಹೆಸರು ಕೇಳಿ ಬಂದಿದೆ.

error: Content is protected !!
Scroll to Top