ಕಾರ್ಕಳ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಕಳ ಸಾಲ್ಮರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ 2023-24 ಸಾಲಿನ ಶೈಕ್ಷಣಿಕ ವರ್ಷಕ್ಕೆ 6 ರಿಂದ 8 ನೇ ತರಗತಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇಲ್ಲಿ ಶೇ. 75 ರಷ್ಟು ಅಲ್ಪಸಂಖ್ಯಾತರ ಸಮುದಾಯಕ್ಕೆ ( ಮುಸ್ಲಿ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್) ಸೇರಿರುವ ಹಾಗೂ ಶೇ. 25ರಷ್ಟು ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಮೀಸಲಾತಿಯಿದೆ. ಆಸಕ್ತ ವಿದ್ಯಾರ್ಥಿಗಳು ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಕಾರ್ಕಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಅರ್ಜಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8762434245 ಅಥವಾ 8123425690 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.









































